BREAKING: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಿಬ್ಬಂದಿ ಸಸ್ಪೆಂಡ್

ಬೀದರ್: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಓವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಇದೀಗ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಅಡುಗೆ ಸಹಾಯಕ ಪ್ರಮೋದ್ ಅಮಾನತುಗೊಂಡವರು. ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ಪ್ರಮೋದ್ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಮೋದ್ ಬಸವಕಲ್ಯಾಣದಲ್ಲಿ ನಡೆದಿದ್ದ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read