ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳದ ಶಬರಿಮಲೆಗೆ ಭೇಟಿ ನೀಡಿದ್ದು, ಅವರು ಪ್ರಯಾಣಿಸುತ್ತಿದ್ದ ಹೆಲುಕಾಪ್ಟರ್ ಲ್ಯಾಂಡಿಂಗ್ ವೇಳೆ ಮಣ್ಣಿನಲ್ಲಿ ಹೂತ ಘಟನೆ ನಡೆದಿದೆ.
ಶಬರಿಮಲೆಗೆ ಭೇಟಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತೀಯ ವಾಯುಸೇನೆ ಎಂಐ-17 ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಂನಿಂದ ತೆರಳಿದ್ದರು. ಬೆಳಿಗ್ಗೆ ಪ್ರಮಾಡಂ ಇನ್ ಡೋರ್ ಸ್ಟೇಡಿಯಂ ನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಚಕ್ರ ನೆಲದಲ್ಲಿ ಹೋತು ಹೋಯಿತು. ಬಳಿಕ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್ ತಳ್ಳಿ ಬದಿಗೆ ಸರಿಸಿದ ಪ್ರಸಂಗ ನಡೆದಿದೆ.
ಪೂರ್ವ ನಿಗದಿ ಪ್ರಕಾರ ರಾಷ್ಟ್ರಪತಿಗಳು ನೀಲಕ್ಕಲ್ ನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಪ್ರಮಾಡಂ ಇನ್ ಡೋರ್ ಸ್ಟೇಡಿಯಂ ನಲ್ಲಿ ಲ್ಯಾಂಡಿಂಗ್ ಮಾಡಬೇಕಾಯಿತು.