ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಹೊಸಕೋಟೆಯಿಂದ ಚಿಂತಾಮಣಿ ಕಡೆ ತೆರಳುತ್ತಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.