ಚಿಕ್ಕಮಗಳೂರು: ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವು ಮಳೆಯ ಅಬ್ಬರ ಮುಂದುವರೆದಿದ್ದು, ಎಮ್ಮೆ ಮೇಯಿಸಲು ಹೋಗಿದ್ದ ರೈತರೊಬ್ಬರು ಹಳ್ಳದಲ್ಲಿ ಬಿದ್ದು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ದೇವಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ಲಕ್ಷ್ಮಣಗೌಡ ಮೃತಪಟ್ಟವರು. ಮಂಗಳವಾರ ಸಂಜೆಯಿಂದ ಲಕ್ಷ್ಮಣಗೌಡ ನಾಪತ್ತೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಧಾರಾಕಾರ ಮಳೆಯಿಂದಾಗಿ ಹಳ್ಳ ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ., ನೀರು ಕಡಿಮೆಯಾದ ಬಳಿಕ ಲಕ್ಷ್ಮಣಗೌಡ ಮೃತದೇಹ ಪತ್ತೆಯಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.