ಬೆಂಗಳೂರು: ಬೆಂಗಳೂರಿನಲ್ಲಿ ಪಟಾಕಿ ಸಿಡಿಸುವಾಗ 190ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕಣ್ಣಿಗೆ ಗಾಯ ಮಾಡಿಕೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಗಾಯಾಳುಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ.
ನಾರಾಯಣ ನೇತ್ರಾಲಯದಲ್ಲಿ 80 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ 33 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 28 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಅದೇ ರೀತಿಯಾಗಿ ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 12 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಮೋದಿ ಕಣ್ಣಿನ ಆಸ್ಪತ್ರೆಯಲ್ಲಿ ಮೂವರು, ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಮೂವರು ಗಾಯಾಳುಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಪಟಾಕಿ ಸಿಡಿಸುವಾಗ, ನೋಟುವಾಗ, ರಸ್ತೆಯಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿದ್ದವರಿಗೆ ಪಟಾಕಿ ಸಿಡಿದು ಗಾಯಗಳಾಗಿವೆ.