ಮೈಸೂರು: ಮೈಸೂರು ರೈಲು ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ ನಡೆದಿದೆ. ಸಿಸಿ ಟಿವಿ ದೃಶ್ಯ ಆಧರಿಸಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಕೆಲವೇ ಗಂಟೆಗಳಲ್ಲಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ತಾಯಿಯ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದರು. ಬಳಿಕ ರೈಲ್ವೆ ಪೊಲೀಸರಿಗೆ ಮಗುವಿನ ಪೋಷಕರು ಮಾಹಿತಿ ನೀಡಿದ್ದರು. ಆಗ ಪೊಲೀಸರು ಸಿಸಿ ಟಿವಿ ದೃಶ್ಯಾವಳಿ ಗಮನಿಸಿದ್ದಾರೆ. ವೃದ್ಧೆ ಮಗುವನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ರೈಲು ನಿಲ್ದಾಣದಲ್ಲಿ ವೃದ್ಧೆಯನ್ನು ಬಂಧಿಸಿ ಮಗುವನ್ನು ವಶಕ್ಕೆ ಪಡೆಯಲಾಗಿದೆ. ಹಾಸನ ಮೂಲದ ನಂದಿನಿ ಎಂಬುವರನ್ನು ಬಂಧಿಸಿದ ಪೊಲೀಸರು ಕೇಸ್ ದಾಖಲಿಸಿದ್ದಾರೆ.