BREAKING: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ದಿಢೀರ್ ಪ್ರತಿಭಟನೆ: ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ದಿಢೀರ್ ಪ್ರತಿಭಟನೆ ಕೈಗೊಂಡಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ.

ಅಟೆಂಡೆನ್ಸ್ ಬೋನಸ್ ಮತ್ತು ವೇತನ ಭತ್ಯೆಗೆ ಒತ್ತಾಯಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್ ಬಸ್ ಚಾಲಕರು ದಿಢೀರ್ ಪ್ರತಿಭಟನೆ ಕೈಗೊಂಡಿದ್ದಾರೆ. ಬಸ್ ಗಳನ್ನು ಡಿಪೋದಿಂದ ತೆಗೆಯದೆ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದಾರೆ. ಡಿಪೋ ನಂಬರ್ 16ರ 100ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ ಗಳ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಎರಡು ವರ್ಷಗಳಿಂದ ಅಟೆಂಡೆನ್ಸ್ ಬೋನಸ್, ವೇತನ ಭತ್ಯೆ ನೀಡುತ್ತಿಲ್ಲ. ಅಪಘಾತವಾದ ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಚಾಲಕರಿಗೆ ಭದ್ರತೆ ಇಲ್ಲವಾಗಿದೆ. ಹೀಗಾಗಿ ಬೇಡಿಕೆ ಈಡೇರುವವರೆಗೆ ಬಸ್ ಗಳನ್ನು ತೆಗೆಯುವುದಿಲ್ಲ ಎಂದು ಚಾಲಕರು ಪಟ್ಟು ಹಿಡಿದಿದ್ದು, ಪ್ರತಿಭಟನೆ ಮುಂದುವರೆಸಿದ್ದಾರೆ. ಎಲೆಕ್ಟ್ರಿಕ್ ಬಸ್ ಚಾಲಕರು ನೇರವಾಗಿ ಬಿಎಂಟಿಸಿ ವ್ಯಾಪ್ತಿಗೆ ಬರುವುದಿಲ್ಲ. ಇವರು ಗುತ್ತಿಗೆ ನೌಕರರಾಗಿದ್ದು, ಖಾಸಗಿ ಸಂಸ್ಥೆ ನೇಮಕ ಮಾಡುತ್ತದೆ. ಒಪ್ಪಂದದಂತೆ ವೇತನ ಭತ್ಯೆ ನೀಡಬೇಕಾಗುತ್ತದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read