ಹಾವೇರಿ: ಹಾವೇರಿ ನಗರದ ಹೃದಯ ಭಾಗದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೀಗ ಮುರಿದು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.
ಹಾವೇರಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಎರಡು ಕೊಠಡಿಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ಆಭರಣ, ತಾಮ್ರದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು 10.67 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ತಾಮ್ರ, ಹಿತ್ತಾಳೆಯ ವಸ್ತುಗಳನ್ನು ಕಳವು ಮಾಡಲಾಗಿದೆ. ಈ ಬಗ್ಗೆ ಡಾ. ವೀಣಾ ಎಸ್. ಶ್ರೀನಿವಾಸ ವೈದ್ಯ ದೂರು ನೀಡಿದ್ದು, ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.