ಹಾಸನಾಂಬೆ ಉತ್ಸವ: ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದಲ್ಲಿ ಕೆಂಡ ಹಾಯ್ದ ಜಿಲ್ಲಾಧಿಕಾರಿ ಲತಾಕುಮಾರಿ

ಹಾಸನ: ಹಾಸನಾಂಬೆ ದೇವಾಲಯದಲ್ಲಿ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ ನಡೆದಿದ್ದು, ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಭಕ್ತರ ಜೊತೆಗೆ ಕೆಂಡ ಹಾಯ್ದಿದ್ದಾರೆ.

ಕಳಸ ಹೊತ್ತು ಮಹಿಳೆಯರು ಕೆಂಡ ಹಾಯುತ್ತಿರುವುದನ್ನು ನೋಡಿದೆ. ನನಗೂ ಕೂಡ ಕೆಂಡ ಹಾಯಬೇಕು ಎಂದು ಮನಸ್ಸಾಯಿತು. ನಾನು ಹಿಂದೆಂದೂ ಕೆಂಡ ಹಾಯ್ದಿರಲಿಲ್ಲ. ಈ ವರ್ಷದ ಹಾಸನಾಂಬೆ ಉತ್ಸವ ಕೊನೆಯಾಗಿದೆ. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಿದೆ ಎಂದು ಕೆಂಡ ಹಾಯ್ದ ಬಳಿಕ ಜಿಲ್ಲಾಧಿಕಾರಿ ಲತಾಕುಮಾರಿ ಹೇಳಿದ್ದಾರೆ.

ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರೂ ಕೆಂಡೋತ್ಸವದಲ್ಲಿ ಭಾಗಿಯಾಗಿ ವೀಕ್ಷಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ನಂತರ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಹಾಸನಾಂಬದ ದೇವಿ ಗರ್ಭಗುಡಿ ಬಾಗಿಲು ಹಾಕಲಾಗುವುದು. ಸಚಿವ ಕೃಷ್ಣ ಬೈರೇಗೌಡ, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಮೊಹಮ್ಮದ್ ಸುಜಿತಾ ಮತ್ತು ಉಪ ವಿಭಾಗಾಧಿಕಾರಿ ಮಾರುತಿ ಸಮ್ಮುಖದಲ್ಲಿ ಬಾಗಿಲು ಮುಚ್ಚಲಾಗುವುದು. ಅಕ್ಟೋಬರ್ 9ರಂದು ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಇದುವರೆಗೆ 26 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಲಾಡು ಪ್ರಸಾದ, ಟಿಕೆಟ್ ಮಾರಾಟದಿಂದ 22 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ. ಈ ಬಾರಿ ಇತಿಹಾಸ ಬರೆದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಮಧ್ಯಾಹ್ನ ತೆರೆ ಬೀಳಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read