ತುಮಕೂರು: ಹಾಸ್ಟೆಲ್ ಕಟ್ಟಡದಿಂದ 15 ವರ್ಷದ ಬಾಲಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಇಂಟರ್ ನ್ಯಾಷನಲ್ ಶಾಲೆಯ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗಿರಿಗೌಡನಪಾಳ್ಯ ಗ್ರಾಮದಲ್ಲಿರುವ ಅರವಿಂದ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕರಾದ ಅಂಥೋನಿ, ಮತ್ತು ಶಿವಕುಮಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಅಕ್ಟೋಬರ್ 13ರಂದು ಕಟ್ಟಡದಿಂದ ನಿಗೂಢವಾಗಿ ಬಾಲಕಿ ಮೋಕ್ಷಾ ಬಿದ್ದಿದ್ದಳು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೋಕ್ಷಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಆಕೆಯ ಹೇಳಿಕೆ ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.