ಬೆಂಗಳೂರು : ಸಿಎಂ ರೇಸ್ ನಲ್ಲಿ ಯಾರೇ ಇದ್ರೂ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ರೇಸ್ ನಲ್ಲಿ ಯಾರೇ ಇದ್ರೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವಸಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಡಿ.ಕೆ.ಶಿವಕುಮಾರ್ ಗೆ ಕೌಂಟರ್ ಆಗಿ ಸಿಎಂ ಪುತ್ರ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೊಸ ನಾಯಕತ್ವದ ದಾಳ ಉರುಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪುತ್ರ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಹಾಡಿ ಹೊಗಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಸತೀಶ್ ಜಾರಕಿಹೊಳಿ ಕುರಿತು ಅಪಾರ ಶ್ಲಾಘನೆ ವ್ಯಕ್ತಪಡಿಸಿದ್ದು, ಈ ಮೂಲಕ ಪರೋಕ್ಷವಾಗಿ ಮುಂದಿನ ಉತ್ತರಾಧಿಕಾರಿ ಹೆಸರು ಮುನ್ನೆಲೆಗೆ ತಂದಿದ್ದಾರೆ ಎನ್ನಲಾಗುತ್ತಿದೆ.