HomeLatest NewsBREAKING: ಹಿರಿಯ ನಟಿ ಉಮಾಶ್ರೀಗೆ ಸಾಣೆಹಳ್ಳಿ 'ಶ್ರೀ ಶಿವಕುಮಾರ ಪ್ರಶಸ್ತಿ'

BREAKING: ಹಿರಿಯ ನಟಿ ಉಮಾಶ್ರೀಗೆ ಸಾಣೆಹಳ್ಳಿ ‘ಶ್ರೀ ಶಿವಕುಮಾರ ಪ್ರಶಸ್ತಿ’

ಚಿತ್ರದುರ್ಗ: ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ವತಿಯಿಂದ ನೀಡಲಾಗುವ ‘ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಹಿರಿಯ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ರಂಗಭೂಮಿಗೆ ಅಪೂರ್ವ ಕೊಡುಗೆ ನೀಡಿದವರಿಗೆ ಸಾಣೆಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘ ವತಿಯಿಂದ ಶ್ರೀ ಶಿವಕುಮಾರ ಪ್ರಶಸ್ತಿ ನೀಡಲಾಗುವುದು. 2004 ರಿಂದಲೂ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೆಸರಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, 50,000 ರೂ. ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ ಅವರನ್ನು ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಣೆಹಳ್ಳಿಯಲ್ಲಿ ನವೆಂಬರ್ 2ರಿಂದ 7ರವರೆಗೆ ನಡೆಯಲಿರುವ ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಉಮಾಶ್ರೀ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular