ಬೆಂಗಳೂರು : ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ (75) ಇಂದು ವಿಧಿವಶರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ (75) ಇಂದು ವಿಧಿವಶರಾಗಿದ್ದಾರೆ.
ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.
ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಶೃಂಗೇರಿ ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡವರು. ಅವರನ್ನು ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿ ಅವರು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಿದರು ಮತ್ತು ಅವರ ಪಟ್ಟಾಭಿಷೇಕ ಸಮಾರಂಭವು ಏಪ್ರಿಲ್ 2014 ರಲ್ಲಿ ನಡೆಯಿತು.

