ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಹಿಟ್ & ರನ್ ಮಾಡಿರುವ ಆರೋಪ ಕೇಳಿಬಂದಿದ್ದು, ಮಹಿಳೆಗೆ ಗಂಭೀರ ಗಾಯವಾಗಿದೆ.
ಅ.4 ರಂದು ರಾತ್ರಿ 1:30 ಕ್ಕೆ ಬ್ಯಾಟರಾಯನಪುರದ ರಸ್ತೆಯಲ್ಲಿ ಎಂಎಂ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಪಘಾತ ನಡೆದ ಬಳಿಕ ನಟಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಮಹಿಳೆ ಸಂಬಂಧಿ ಕಿರಣ್ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಿಸಿದ್ದಾರೆ.
ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮಂಡಿ ಚಿಪ್ಪಿಗೆ ಪೆಟ್ಟಾಗಿತ್ತು. ಗಾಯಗೊಂಡ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಿರಣ್ ಬೈಕ್ ಓಡಿಸುತ್ತಿದ್ದರು, ಅವರ ಹಿಂದೆ ಅನಿತಾ ಎಂಬ ಮಹಿಳೆ ಕೂತಿದ್ದರು. ಕಾರು ಚಲಾಯಸುತ್ತಿದ್ದ ದಿವ್ಯಾ ಸುರೇಶ್ ಕಿರಣ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆ ಬಳಿಕ ದಿವ್ಯಾ ಸುರೇಶ್ ಕಾರು ನಿಲ್ಲಿಸದೇ ಪರಾರಿಯಾಗಿರುವ ಆರೋಪ ಕೇಳಿಬಂದಿದೆ.
You Might Also Like
TAGGED:ಬಿಗ್ ಬಾಸ್
