SHOCKING : ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳು ಸಜೀವ ದಹನ.!

ಆಂಧ್ರಪ್ರದೇಶ : ಕರ್ನೂಲ್ ಬಸ್ ದುರಂತದಲ್ಲಿ ಬೆಂಗಳೂರಿನ ಮಹಿಳಾ ಟೆಕ್ಕಿಗಳು ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ.

ಕರ್ನೂಲ್ ಬಸ್ ದುರಂತದಲ್ಲಿ ಮೃತಪಟ್ಟ 20 ಪ್ರಯಾಣಿಕರ ಪೈಕಿ ಬೆಂಗಳೂರಿನ ಟೆಕ್ಕಿಗಳು ಸೇರಿದ್ದಾರೆ.
ಮೃತರನ್ನು ಸಾಫ್ಟ್ವೇರ್ ಎಂಜಿನಿಯರ್ ಗಳಾದ ಅನುಷಾ, ಗನ್ನ ಮನೇನಿ ಧಾತ್ರಿ ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಅನುಷಾ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ. ಅದೇ ರೀತಿ ಧಾತ್ರಿ ಬಾಪಟ್ಲ ಜಿಲ್ಲೆಯವರಾಗಿದ್ದು, ಮಾವನ ಮನೆಯಿಂದ ವಾಪಸ್ ಬರುತ್ತಿದ್ದಾಗ ಸಾವನ್ನಪ್ಪಿದ್ದಾರೆ.

ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ತೆಲಂಗಾಣ ಸರ್ಕಾರ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದೆ. ಅದೇ ರೀತಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಮೂಲಕ ಮೃತರ ಕುಟುಂಬಕ್ಕೆ ಒಟ್ಟು ತಲಾ 7 ಲಕ್ಷ ಪರಿಹಾರ ಸಿಗಲಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ 42 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಜನರು ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read