HomeLatest Newsಸಾಲ ಸೌಲಭ್ಯಕ್ಕಾಗಿ  ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನ

ಸಾಲ ಸೌಲಭ್ಯಕ್ಕಾಗಿ  ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನ

ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಬ್ಯಾಂಕ್ಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ನಗರದ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.

ಬೇಕಾದ ದಾಖಲೆ:

ಅರ್ಜಿದಾರರ ಆಧಾರ್ ಕಾರ್ಡ್, ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, 2 ಪಾಸ್ಪೋರ್ಟ್ ಭಾವಚಿತ್ರ, ವ್ಯಾಪಾರ ಮಾಡುವ ಭಾವಚಿತ್ರ, ರೇಷನ್ ಕಾರ್ಡ್ ಇನ್ನಿತರೆ ದಾಖಲೆಗಳನ್ನು ಸಲ್ಲಿಸಬೇಕು. ಬೀದಿ ಬದಿ ವ್ಯಾಪಾರಸ್ಥರು ಪಿಎಮ್-ಸ್ವಾನಿಧಿ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಛೇರಿ – 2 ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular