ವಿಜಯಪುರ: ಪತಿ ಮಹಾಶಯನೊಬ್ಬ ಹಾಡಹಗಲೇ ನಡು ರಸ್ತೆಯಲ್ಲಿಯೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆನಂದ ಟಾಕೀಸ್ ಬಳಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಬರುತ್ತಿದ್ದ ಪತ್ನಿಯನ್ನು ಹಿಂದಿನಿಂದ ಬಂದ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ನಡು ರಸ್ತೆಯಲ್ಲಿಯೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಪತ್ನಿ ರಸ್ತೆಯಲ್ಲಿಯೇ ರಕ್ತದ ಮಡುವಲ್ಲಿ ಬಿದ್ದರೂ ಹಲ್ಲೆ ನಡೆಸುವುದನ್ನು ನಿಲ್ಲಿಸಿಲ್ಲ. ಸ್ಥಳೀಯರು ಬಂದು ಪತ್ನಿ ಮಹಾಶಯನನ್ನು ತಡೆಯಲು ಯತ್ನಿಸಿದ್ದಾರೆ.
ಯಾವ ಕಾರಣಕ್ಕೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ? ಹೆಚ್ಚಿನ ಮಾಹಿತಿ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ.
