HomeLatest NewsBREAKING: ಎಂಬಿಎ, ಎಂಸಿಎ, ಎಂಇ ಕೋರ್ಸ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ...

BREAKING: ಎಂಬಿಎ, ಎಂಸಿಎ, ಎಂಇ ಕೋರ್ಸ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: MBA, MCA, ME, M.Tech, M.Arch ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆಗಳು ಇದ್ದಲ್ಲಿ ಅ.25ರಂದು ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ ([email protected]) ಮೂಲಕ ತಿಳಿಸಬಹುದು.

2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಧಿಕಾರವು ಈಗಾಗಲೇ ತಿಳಿಸಿದಂತೆ ಎಂಬಿಎ / ಎಂಸಿಎ / ಎಂಇ / ಎಂಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ದಿನಾಂಕ 24-10-2025 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಿದೆ.

1. ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ 23-10-2025 ರ ಬೆಳಿಗ್ಗೆ 10.30 ರವರೆಗೆ ನಮೂದಿಸಿದ Options ಗಳನ್ನು ಪರಿಗಣಿಸಲಾಗಿದೆ.

2. ಇದು PGCET-2025 ರ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವಾಗಿದ್ದು, ಅಭ್ಯರ್ಥಿಗಳು ತಾತ್ಕಾಲಿಕವಾಗಿ ಹಂಚಿಕೆಯಾಗಿರುವ ಸೀಟಿಗೆ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ.

3. ಯಾವುದಾದರೂ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ (Options ಗಳನ್ನು ದಾಖಲಿಸಲಾಗಿದೆ, ಎರಡನೇ ಸುತ್ತಿನ ಕಟ್‌ಆಫ್ ಬ್ಯಾಂಕ್ ಪರಿಶೀಲಿಸಲಾಗಿದೆ. ಆದರೆ ಯಾವುದೂ ಸೀಟು ಹಂಚಿಕೆಯಾಗಿಲ್ಲ) ದಿನಾಂಕ 25-10-2025 ರ ಮಧ್ಯಾಹ್ನ 1.00 ರೊಳಗೆ [email protected] ಗೆ ಎಲ್ಲಾ ವಿವರಗಳೊಂದಿಗೆ ಮೇಲ್ ಮಾಡಬಹುದು.

4. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular