HomeLatest NewsBREAKING NEWS: ಶಾಲೆಗೆ ಹೋಗಿದ್ದ ಸಹೋದರಿಯರು ನಾಪತ್ತೆ: ಪೋಷಕರಿಂದ ದೂರು

BREAKING NEWS: ಶಾಲೆಗೆ ಹೋಗಿದ್ದ ಸಹೋದರಿಯರು ನಾಪತ್ತೆ: ಪೋಷಕರಿಂದ ದೂರು

ಕೋಲಾರ: ಶಾಲೆಗೆ ಹೋಗಿದ್ದ ಸಹೋದರಿಯರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆಯ ರಮೇಶ್ ಎಂಬುವವರ ಪುತ್ರಿಯರು ಶಾಲೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ.

ಮೋನಿಕಾ(14), ತನುಶ್ರೀ(11) ಶಾಲೆಗೆ ಹೋದವರು ಮನೆಗೆ ಬಂದಿಲ್ಲ. ಮುಳಬಾಗಿಲು ಪಟ್ಟಣದ ಮುತ್ಯಾಲಪೇಟೆಯ ನಿವಾಸಿಗಳಾಗಿರುವ ಇವರು ಮುಳಬಾಗಿಲಿನ ಜ್ಞಾನವಾಹಿನಿ ಶಾಲೆಯಲ್ಲಿ ಓದುತ್ತಿದ್ದಾರೆ.

ಬೆಳಗ್ಗೆ ಶಾಲೆಗೆ ಹೋಗುವುದಾಗಿ ವಿದ್ಯಾರ್ಥಿನಿಯರಾದ ಮೋನಿಕಾ ಮತ್ತು ತನುಶ್ರೀ ಮನೆಯಿಂದ ತೆರಳಿದ್ದರು. ಶಾಲೆಗೂ ಹೋಗದೆ, ಮನೆಗೂ ಬಾರದೆ ಬಾಲಕಿಯರು ನಾಪತ್ತೆಯಾಗಿದ್ದಾರೆ. ಪೋಷಕರು ಎಷ್ಟೇ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮುಳಬಾಗಿಲು ಟೌನ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular