HomeLatest Newsಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಿ ಪೊಲೀಸ್ ಇಲಾಖೆ ಘನತೆ ಹೆಚ್ಚಿಸಿ: ರಾಜ್ಯದ ಪೊಲೀಸರಿಗೆ ಐಜಿಪಿ ಮಹತ್ವದ...

ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಿ ಪೊಲೀಸ್ ಇಲಾಖೆ ಘನತೆ ಹೆಚ್ಚಿಸಿ: ರಾಜ್ಯದ ಪೊಲೀಸರಿಗೆ ಐಜಿಪಿ ಮಹತ್ವದ ಮಾರ್ಗಸೂಚಿ

ಬೆಂಗಳೂರು: ಸಾರ್ವಜನಿಕರ ಜೊತೆಗೆ ಸೌಜನ್ಯದಿಂದ ವರ್ತಿಸಬೇಕು ಎಂದು ರಾಜ್ಯದ ಪೊಲೀಸರಿಗೆ ಡಿಜಿ ಐಜಿಪಿ ಡಾ.ಎಂ.ಎ. ಸಲೀಂ ಮಹತ್ವದ ಸೂಚನೆ ನೀಡಿದ್ದಾರೆ.

ಜನರ ಜೊತೆಗೆ ಪೊಲೀಸರು ಹೇಗೆ ನಡೆದುಕೊಳ್ಳಬೇಕೆಂಬ ಬಗ್ಗೆ ಮಾರ್ಗಸೂಚಿ ಹೊರಡಿಸಿದ್ದಾರೆ. ಸಮಾಜದಲ್ಲಿ ಪೊಲೀಸ್ ಇಲಾಖೆ ಬಗ್ಗೆ ಉತ್ತಮ ಅಭಿಪ್ರಾಯ ಮೂಡಬೇಕು. ಪಾರದರ್ಶಕತೆ, ಸೌಜನ್ಯದ ವರ್ತನೆ, ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ ಎದ್ದು ಕಾಣಬೇಕು. ಸಾರ್ವಜನಿಕರ ಮೇಲೆ ಬಲ ಪ್ರಯೋಗ ಮಾಡುವುದು ಅಥವಾ ದರ್ಪದಿಂದ ವರ್ತಿಸುವುದು ಇಲಾಖೆಯ ಘನತೆಗೆ ತಕ್ಕನಾದ ನಡವಳಿಕೆಯಲ್ಲ. ಹಕ್ಕುಗಳಿಗೆ ಗೌರವ ನೀಡಬೇಕು ಮತ್ತು ಸಂಯಮದಿಂದ ವರ್ತಿಸಬೇಕು. ಇದು ಇಲಾಖೆಯ ಘನತೆ ಹೆಚ್ಚಿಸಿ ಜನರಲ್ಲಿ ಗೌರವ ಮೂಡುವಂತೆ ಮಾಡುತ್ತದೆ ಎಂದು ಡಿಜಿ ಐಜಿಪಿ ಸಲೀಂ ಅವರು ಪೊಲೀಸರಿಗೆ ಮಾರ್ಗಸೂಚಿ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular