HomeLatest NewsBIG NEWS: ನ. 14ರಿಂದ ಮಂಗಳೂರು, ರಾಯಚೂರು ಸೇರಿ ರಾಜ್ಯದ ವಿವಿಧೆಡೆ ಸಹಕಾರ ಸಪ್ತಾಹ: ಸಿಎಂ...

BIG NEWS: ನ. 14ರಿಂದ ಮಂಗಳೂರು, ರಾಯಚೂರು ಸೇರಿ ರಾಜ್ಯದ ವಿವಿಧೆಡೆ ಸಹಕಾರ ಸಪ್ತಾಹ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು ನವೆಂಬರ್ 20ರಂದು ಚಾಮರಾಜನಗರದಲ್ಲಿ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ “ಸಹಕಾರ ರತ್ನ” ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡುತ್ತೇನೆ ಎಂದರು.

ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೆ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ ಭಾಗವಹಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೆಚ್.ಕೆ. ಪಾಟೀಲ್, ಕೆ.ಎನ್. ರಾಜಣ್ಣ, ಜಿ.ಟಿ. ದೇವೇಗೌಡ, ಎಸ್.ಟಿ. ಸೋಮಶೇಖರ್ ಮೊದಲಾದವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular