HomeLatest Newsಕಂದಾಯ, ಬಿಡಿಎ ಸೇರಿ ವಿವಿಧ ಇಲಾಖೆಗಳ ಇನ್ನೂ 29 ಸೇವೆಗಳು ಏಕಗವಾಕ್ಷಿಗೆ ಸೇರ್ಪಡೆ: ಸಿಎಂ ಘೋಷಣೆ

ಕಂದಾಯ, ಬಿಡಿಎ ಸೇರಿ ವಿವಿಧ ಇಲಾಖೆಗಳ ಇನ್ನೂ 29 ಸೇವೆಗಳು ಏಕಗವಾಕ್ಷಿಗೆ ಸೇರ್ಪಡೆ: ಸಿಎಂ ಘೋಷಣೆ

ಬೆಂಗಳೂರು: ಏಕಗವಾಕ್ಸಿಗೆ ವಿವಿಧ ಇಲಾಖೆಗಳ ಇನ್ನೂ 29 ಸೇವೆಗಳನ್ನು ಸೇರ್ಪಡೆ ಮಾಡಲಾಗುವುದು. ಹೂಡಿಕೆ ಯೋಜನೆಗಳಿಗೆ ಸಂಬಂಧಿಸಿದ ಲೈಸೆನ್ಸ್ ನೀಡಿಕೆಗೆ ಕಾಲಮಿತಿ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಬಿಡಿಎ, ಕಂದಾಯ, ಅಗ್ನಿಶಾಮಕ, ಔಷಧ ನಿಯಂತ್ರಣ ಸೇರಿದಂತೆ ವಿವಿಧ ಇಲಾಖೆಗಳ ಇನ್ನು 29 ಸೇವೆಗಳನ್ನು ಶೀಘ್ರದ ಏಕಗವಾಕ್ಷಿಯಡಿ ತರಲಾಗುವುದು ಎಂದು ಹೇಳಿದ್ದಾರೆ.

ಏಕಗವಾಕ್ಷಿ ಪೋರ್ಟಲ್ ನಡಿ ಇಪ್ಪತ್ತು ಇಲಾಖೆಗಳ 115 ಸೇವೆಗಳನ್ನು ತರಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಯಿಂದ ಅನುಮೋದನೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎನ್ನುವ ದೂರುಗಳಿವೆ. ಮುದ್ರಾಂಕ ಮತ್ತು ನೋಂದಣಿ, ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಮಿಕ ಇಲಾಖೆ, ಅಗ್ನಿಶಾಮಕ, ಕಂದಾಯ, ಔಷಧ ನಿಯಂತ್ರಣ, ಕೆಐಎಡಿಬಿ, ಬಿಡಿಎ ಮೊದಲಾದ ಇಲಾಖೆಗಳ ಇನ್ನೂ 29 ಸೇವೆಗಳನ್ನು ಏಕಗವಾಕ್ಷಿ ಅಡಿ ತರಲಾಗುವುದು. ಹೂಡಿಕೆ ಯೋಜನೆಗಳಿಗೆ ಸಂಬಂಧಿಸಿದಂತೆ ಕಡಿಮೆ ಕಾಲಮಿತಿಯಲ್ಲಿ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular