HomeLatest Newsಪುರಸಭೆ ಮುಖ್ಯಾಧಿಕಾರಿ ಟೇಬಲ್ ಮೇಲಿದ್ದ ಕಡತಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿ ಪರಾರಿ

ಪುರಸಭೆ ಮುಖ್ಯಾಧಿಕಾರಿ ಟೇಬಲ್ ಮೇಲಿದ್ದ ಕಡತಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿ ಪರಾರಿ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ಪುರಸಭೆ ಮುಖ್ಯಾಧಿಕಾರಿಯವರ ಕೊಠಡಿಯಲ್ಲಿ ಟೇಬಲ್ ಮೇಲೆ ಇರಿಸಿದ್ದ ಕಡತಗಳಿಗೆ ಶುಕ್ರವಾರ ದುಷ್ಕರ್ಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಶುಕ್ರವಾರ ಮಧ್ಯಾಹ್ನದಿಂದ ಕಚೇರಿಯ ಕಾರಿಡಾರ್ ನಲ್ಲಿ ಓಡಾಡುತ್ತಿದ್ದ ಆರೋಪಿ ಬೆಂಕಿ ಹಚ್ಚಿದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತನ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿಯನ್ನು ಪುರಸಭೆ ಸದಸ್ಯ ಮತ್ತು ಸಿಬ್ಬಂದಿ ನೋಡಿದ್ದಾರೆ. ಕಚೇರಿ ಒಳಗೆ ಬಂದು ಆತ ಚೀರಾಡಿದ್ದ. ಸಿಬ್ಬಂದಿ ಇರುವಾಗಲೇ ಕಡತಗಳಿಗೆ ಬೆಂಕಿ ಹಚ್ಚಿ ಸ್ಕೂಟರ್ ಹತ್ತಿ ಹೋಗುವವರೆಗೆ ಆತನನ್ನು ಸಿಬ್ಬಂದಿ ಹಿಡಿದಿಲ್ಲ. ಆತನ ಕೈಯಲ್ಲಿ ಚಾಕು ಕೂಡ ಇತ್ತು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ- ಖಾತೆ ಸೇರಿದಂತೆ ಇತರೆ ಕಚೇರಿ ಕೆಲಸಗಳಿಗೆ ಜನರು ಅಲೆದಾಡುತ್ತಿದ್ದು, ಇದರಿಂದ ಬೇಸತ್ತು ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular