ಬೆಂಗಳೂರು : ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡೋಕೆ ಸಿದ್ದನಿದ್ದೇನೆ. ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಪಕ್ಷ ನನಗೆ ಅರ್ಹತೆ ಮೀರಿ ಅವಕಾಶ ಕೊಟ್ಟಿದೆ. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.
ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ತೃಪ್ತಿ ಇಲ್ಲ ಎಂದರು. ಅಗತ್ಯ ಬಿದ್ರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದನಿದ್ದೇನೆ . ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ಸಿದ್ದನಿದ್ದೇನೆ ಎಂದಿದ್ದಾರೆ.
