ಚಿಕ್ಕಮಗಳೂರು: ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಚಡ್ಡಿ ಗ್ಯಾಂಗ್ ನ ಇಬ್ಬರು ಕಳ್ಳರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪ ಪವಾರ್ ಹಾಗೂ ಮಂಗೇಶ್ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 32 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರಿನ ಪೊಲೀಸ್ ಬಡಾವಣೆಯಲ್ಲಿ ಚಡ್ದಿ ಗ್ಯಾಂಗ್ ಕಳ್ಳತನ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಚಿತ್ರದುರ್ಗ, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
