BIG NEWS: ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಎ ಖಾತಾ ಹಾಗೂ ಬಿ ಖಾತಾ ಪರಿವರ್ತನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಜೆಡಿಎಸ್ ಆರೋಪದ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ ಇದ್ದೇನೆ. ಎ ಖಾತಾ ಬಿ ಖಾತಾ ವಿಚಾರದಲ್ಲಿ ಯಾವ ಭ್ರಷ್ಟಾಚಾರ ನಡೆಯುತ್ತಿದೆ? ಬೆಂಗಳೂರು ನಾಗರಿಕರ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಲು, ಅವರಿಗೆ ಮುಂದೆ ಬ್ಯಾಂಕ್ ಸಾಲ ಹಾಗೂ ಇತರೆ ಸೌಲಭ್ಯ ಸಿಗಬೇಕು, ಜನರಿಗೆ ಉತ್ತಮ ಸೌಕರ್ಯ ಒದಗಿಸಬೇಕು, ಜನರು ತೆರಿಗೆ ಪಾವತಿಸುವಂತಾಗಬೇಕು ಎಂಬ ಉದ್ದೇಶದಿಂದ ನಾವು ಈ ಯೋಜನೆ ಮಾಡುತ್ತಿದ್ದೇವೆ. ಜನರ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ. ನಮ್ಮ ಈ ಕಾರ್ಯವನ್ನು ದೇಶದ ಯಾವುದೇ ನಗರದಲ್ಲಿ ಮಾಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ನಮ್ಮ ಈ ಯೋಜನೆಗೆ ಸಾವಿರಾರು ಜನ ಅರ್ಜಿ ಹಾಕುತ್ತಿದ್ದಾರೆ. ಅವರ ಕಾಲದಲ್ಲಿ ಯಾಕೆ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಿಲ್ಲ? ಇ ಖಾತಾ ಮಾಡಿಕೊಡಲು ಅವರಿಂದ ಆಗಲಿಲ್ಲ. ಅವರಿಗೆ ಇಂತಹ ಯಾವುದೇ ಆಲೋಚನೆಗಳು ಇರಲಿಲ್ಲ. ಕುಮಾರಸ್ವಾಮಿ ಅವರು ಕೈಗಾರಿಕೆ ತರುತ್ತೇನೆ ಎನ್ನುತ್ತಾರಲ್ಲ, ತರಲಿ. ರಾಮನಗರದಲ್ಲಿ ಕೈಗಾರಿಕೆ ಮಾಡುತ್ತಾರೋ, ಬಿಡದಿಯಲ್ಲಿ ಮಾಡುತ್ತಾರೋ, ಮಂಡ್ಯದಲ್ಲಿ ಮಾಡುತ್ತಾರೋ ಎಲ್ಲಿ ಮಾಡುತ್ತಾರೆ ಎಂದು ಅವರೇ ಪಟ್ಟಿ ನೀಡಲಿ. ಅಗತ್ಯ ಭೂಮಿ ಬಗ್ಗೆ ಅರ್ಜಿ ಹಾಕಲಿ. ಸುಮ್ಮನೆ ಖಾಲಿ ಮಾತಾಡಿದರೆ ಯಾರೂ ಒಪ್ಪುವುದಿಲ್ಲ ಎಂದು ತಿಳಿಸಿದರು.

ಬಿಜೆಪಿ ಅಧಿಕಾರಿಕ್ಕೆ ಬಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರದ್ದು ಮಾಡುವುದಾಗಿ ಹೇಳುತ್ತಿರುವ ಬಗ್ಗೆ ಅವರು ಅಧಿಕಾರಕ್ಕೆ ಬಂದಾಗ, ಏನು ಬೇಕಾದರೂ ಮಾಡಲಿ. ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಅವರ ಹಣೆಯಲ್ಲಿ ಬರೆದಿಲ್ಲ. ಇದು ಹೀಗೆ ಮುಂದುವರಿಯಲಿದೆ. ಅವರಿಗೆ ಜಿಬಿಎ ಬೇಡವಾದರೆ ಅವರು ಮುಂಬರುವ ಪಾಲಿಕೆಗಳ ಚುನಾವಣೆಯನ್ನು ಬಹಿಷ್ಕರಿಸಲಿ. ಚುನಾವಣೆಯಿಂದ ಹಿಂದೆ ಸರಿಯಲಿ ನೋಡೋಣ. ಅವರ ಕಾರ್ಯಕರ್ತರೆಲ್ಲರೂ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗುತ್ತಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read