ಬೆಂಗಳೂರು: ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಸಚಿವ ಸತೀಶ್ ಜಾರಕಿಹೊಳಿ ಮುಂದಿನ ಉತ್ತರಾಧಿಕಾರಿ ಎಂಬರ್ಥದಲ್ಲಿ ಮಾತನಾಡಿದ್ದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ಕೊಡುವ ಧೈರ್ಯವಿಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಎಲ್ಲದಕ್ಕೂ ಹೈಕಮಾಂಡ್ ಕಡೆ ಮುಖ ಮಾಡುವ ನೀವು ನಾಳೆ ಸಿಎಮ್ ಆದರೆ ರಾಜ್ಯವನ್ನು ಹೇಗೆ ಮುನ್ನಡೆಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
ಬಹಿರಂಗ ಹೇಳಿಕೆ ನೀಡಿದ ಶಾಸಕರಿಗೆ ನೋಟಿಸ್ ಕೊಡುತ್ತೀರಿ. ಸೀನಿಮಾ ನಟರಿಗೆ ನಟ್ ಬೋಲ್ಟ್ ಟೈಟ್ ಮಾಡುವುದಾಗಿ ಧಮ್ಕಿ ಹಾಕುತ್ತೀರಿ. ಈಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೋಟಿಸ್ ಕೊಡುವ ಧೈರ್ಯವಿಲ್ಲವೇ? ಎಂದು ಕೇಳಿದ್ದಾರೆ.
