HomeLatest Newsಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್‌ ಹೆಸರಿನಲ್ಲಿ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: ವಿಧಾನಪರಿಷತ್‌ ಸದಸ್ಯ ಕೆ....

ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್‌ ಹೆಸರಿನಲ್ಲಿ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: ವಿಧಾನಪರಿಷತ್‌ ಸದಸ್ಯ ಕೆ. ಶಿವಕುಮಾರ್‌ ಘೋಷಣೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಶಿವಕುಮಾರ್‌ ಅವರು ಘೋಷಿಸಿದರು.

ಅವರು ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್.‌ ಅಂಬೇಡ್ಕರ್‌ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ, ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು.

ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ ವೃತ್ತಿ ಜೀವನ ಹಾಗೂ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಣೆಯ ಸಂದರ್ಭಗಳನ್ನು ಮೆಲುಕು ಹಾಕಿದ ಶಿವಕುಮಾರ್‌ ಅವರು ಅಕಾಡೆಮಿಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು, ಶಿವಕುಮಾರ್‌ ಅವರು ಮೂರು ದಶಕಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠುರ ವರದಿಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಅವರು ಇಂದು ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವುದು ಪತ್ರಕರ್ತರಿಗೆಲ್ಲ ಹೆಮ್ಮೆಯ ವಿಷಯ. ಅವರು ಅಕಾಡೆಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ಬೆಂಬಲ ಪತ್ರಕರ್ತರಿಗೆ ಸದಾ ಇರುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದಸ್ಯರಾದ ಕೆ. ನಿಂಗಜ್ಜ, ಕೆ.ವೆಂಕಟೇಶ್‌, ಶಿವಾನಂದ ತಗಡೂರು, ಅಬ್ಬಾಸ್‌ ಮುಲ್ಲಾ ಮೊದಲಾದವರು ಶಿವಕುಮಾರ್‌ ಅವರ ಕುರಿತು ಮಾತನಾಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular