ಬೆಳಗಾವಿ: ರಾಜ್ಯ ಮಂತ್ರಿ ಮಂಡಲ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.
ಸಂಪುಟ ಪುನಾರಚನೆ ಮಾಡುವಂತೆ ನಾಲ್ಕು ತಿಂಗಳ ಹಿಂದೆಯೇ ಹೈಕಮಾಂಡ್ ಸೂಚನೆ ನೀಡಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷವಾಗಲಿ ಎಂದು ಹೇಳಿದ್ದೆ. ಈಗ ಸರ್ಕಾರಕ್ಕೆ ಎರಡೂವರೆ ವರ್ಷವಾಗುತ್ತಿದೆ. ಹೀಗಾಗಿ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡುತ್ತೇನೆ. ಹೈಕಮಾಂಡ್ ಹೇಳಿದರೆ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆಗಾಗಿ ದೆಹಲಿಗೆ ತೆರಳಲಿದ್ದು, ಪಕ್ಷದ ನಾಯಕರನ್ನು ಭೇಟಿಯಾಗುತ್ತೇನೆ. ರಾಜ್ಯದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ವಿದ್ಯಮಾನಗಳ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.
