ಮೈಸೂರು: ಮುಂದಿನ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಜತೆಗೆ ಉಪ್ಪು, ಎಣ್ಣೆ, ಬೇಳೆ, ಸಕ್ಕರೆ ಒಳಗೊಂಡ ಇಂದಿರಾ ಫುಡ್ ಕಿಟ್ ವಿತರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಆಹಾರ, ಗ್ರಾಹಕ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದ ತೆರೆಯಲಾಗಿರುವ ನೂತನ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಬಡವರಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ಯೋಜನೆಯಿಂದ ಸುಮಾರು 4.5 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ಮಾಹಿತಿ ನೀಡಿದವರ ಬಿಪಿಎಲ್ ಕಾರ್ಡ್ ರದ್ದಾಗುವುದಿಲ್ಲ. ಯಾರೂ ಗೊಂದಲಕ್ಕೆ ಒಳಗಾಗಬಾರದು. ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಯಾವುದೇ ತೊಂದರೆ ಇಲ್ಲ. ಅನರ್ಹ ಕಾರ್ಡ್ ರದ್ದುಗೊಳಿಸದೇ ಬಿಪಿಎಲ್ ನಿಂದ ಎಪಿಎಲ್ ಗೆ ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ.
