ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಅರ್ಚಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಶ್ವತ್ಥನಾರಾಯಣ ಆತ್ಮಹತ್ಯೆಗೆ ಶರಣಾಗಿರುವ ಅರ್ಚಕ. ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಶ್ವತ್ಥನಾರಾಯಣ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.
