ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತ್ರಿ ಬಹುತೇಕ ಖಚಿತವಾಗಿದೆ. ಸಚಿವ ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನವೆಂಬರ್ 20ರಂದು ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಲಿವೆ. ಇದಕ್ಕೂ ಮುನ್ನವೇ ಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರು, ಶಾಸಕರು, ಡಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ನವೆಂಬರ್ 20ರೊಳಗೆ ಡಿಸಿಸಿ, ಬಿಸಿಸಿಗಳು ಕಚೇರಿಗಳನ್ನು ಹೊಂದಲು ಡೆಡ್ ಲೈನ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ನಲ್ಲಿ ಮಹತ್ವದ ಬದಲಾವಣೆ ನಡೆಯುವುದಂತೂ ಬಹುತೇ ಖಚಿತ ಎನ್ನಲಾಗಿದೆ.
