ಬೆಂಗಳೂರು: ಈರುಳ್ಳಿ ಮೂಟಗಳಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್, ರಾಮ್ ಭೂಪಾಲ್ ಬಂಧಿತ ಆರೋಪಿಗಳು. ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀಗಂಧ ಕಳ್ಳಸಾಗಾಣೆ ಕಿಂಗ್ ಪಿನ್ ಸಿರಾಜ್ ಎಂಬಾತ ತಾನು ಈರುಳ್ಳಿ ಮಾರಾಟಗಾರರ ಎಂದು ವೇಷ ಹಾಕಿಕೊಂಡು ಆಂಧ್ರಪ್ರದೇಶದ ಕರ್ನೂಲ್ ನಿಂದ ಈಶ್ರೀಗಂದದ ತುಂಡುಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ. ಬೆಂಗಳೂರಿಗೆ ಬಂದ ಶ್ರೀಗಂಧದ ತುಂಡುಗಳನ್ನು ಚೀನಾಗೆ ಸಪ್ಲೈ ಮಾಡಲಾಗುತ್ತಿತ್ತು.
ಹೀಗೆ ಈರುಳ್ಳಿ ಮೂಟೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ತುಂಡುಗಳ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಈರುಳ್ಳಿ ಮೂಟೆಗಳ ಸಮೇತ 18 ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.
