ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನದೊಡ್ಡಿಯಲ್ಲಿ ನಡೆದಿದೆ.
ಕಂಟೈನರ್ ವಾಹನ ಪಲ್ಟಿಯಾಗಿ ಬಿದ್ದ ಪರಿಣಾಮ ಅದರಡಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
