ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಪೊಲೀಸರು ಪ್ರಮುಖ ಆರೋಪಿ ರವಿ ಮತ್ತು ಗೌಳಿ ಗಂಗಾಧರ ಅವರನ್ನು ಬಂಧಿಸಿದ್ದಾರೆ. ಅಕ್ಟೋಬರ್ 8ರಂದು ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದ ಎ1 ಆರೋಪಿ ರವಿ ಬಂಧಿಸಲಾಗಿದೆ.
ಈಗಾಗಲೇ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ರವಿ ಪತ್ನಿ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ರವಿ ಬಂಧನಕ್ಕೆ ಕೊಪ್ಪಳ ಎಸ್ಪಿ ವಿಶೇಷ ತಂಡ ರಚಿಸಿದ್ದರು. ಇಂದು ಪ್ರಮುಖ ಆರೋಪಿ ರವಿ, ಗಂಗಾಧರ ಅವರನ್ನು ಬಂಧಿಸಲಾಗಿದೆ.
