ಕೊಡಗು: ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತಕ್ಕೀಡಾಗಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಯುವಕ ಏಕಾಏಕಿ ಕುಸಿದು ಬಿದ್ದಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರುಣ್ ಪೂಜಾರಿ (25) ಮೃತ ಯುವಕ.
