ಬೆಳಗಾವಿ: ಸಚಿವ ಸಂಪುಟ ಪುನಾರಚನೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ ಹಳಬರು ಹೋಗಿ ಹೊಸಬರು ಬರ್ತಾರೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಸಂಪುಟಕ್ಕೆ ಹಳಬರು ಹೋಗಿ ಹೊಸಬರು ಬರ್ತಾರೆ. ೩೦ ತಿಂಗಳ ಬಳಿಕ ಸಂಪುಟ ಪುನಾರಚನೆ ಮಾಡಬೇಕು ಅಂತಾ ಇತ್ತು. ಈ ಚರ್ಚೆ ಈಗ ಅಂತಿಮ ಹಂತಕ್ಕೆ ಬಂದಿರಬೇಕು. ಯಾರಿಗೆ ಕೊಕ್ ಕೊಡ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.
ದೆಹಲಿ ಮಟ್ಟದಲ್ಲಿ ಚರ್ಚೆ ಆಗಿದ್ದರೂ ಆಗಿರಬಹುದು. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಬಹಿರಂಗವಾಗಿ ಹೇಳಿದ್ದಾರೆ. ಹಾಗಾಗಿ ಸಿಎಂ, ಡಿಸಿಎಂ, ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿರಬಹುದು ಎಂದರು.
ಇನ್ನು ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಹೈಕಮಾಂಢೇಳಿದರೆ ಪಾಲನೆ ಮಾಡಬೇಕು ಎಂದಿದ್ದಾರೆ.
