ಬೆಂಗಳೂರು: ಆರ್.ಎಸ್.ಎಸ್ ಸದಸ್ಯನಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ ನೀಡಿ ಆದೇಶ ಹೊರಡಿಸಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆ.ಎನ್.ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೇ ಇದ್ದು, ಸಿಎಂ ಸಿದ್ದರಾಮಯ್ಯನವರೇ ಯಶಸ್ವಿನಿ ಸಹಕಾರ ಆರೋಗ್ಯ ಟ್ರಸ್ಟ್ ನ ಮಹಾಪೋಷಕರಾಗಿದ್ದಾರೆ. ಆರ್.ಎಸ್.ಎಸ್ ಸದಸ್ಯ ಡಾ.ಶ್ರೀಧರ್ ಕುಮಾರ್ ರನ್ನು ಟ್ರಸ್ಟ್ ಸದಸ್ಯರನ್ನಾಗಿ ಮಾಡಿ ಆದೇಶ ಹೊರಡಿಸಿರುವುದು ಸೂಕ್ತವಲ್ಲ. ಸಿಎಂ ಅವರೇ ಈ ಆದೇಶ ಹೊರಡಿಸಿರಬಹುದಾದ ಸಾಧ್ಯತೆ ಇದೆ. ಹಾಗಾಗಿ ಸಿಎಂ ಗಮನಕ್ಕೆ ತರುತ್ತಿರುವುದಾಗಿ ಕಾಂಗ್ರೆಸ್ ಮುಖಂಡ ಟೂಡಾ ಶ್ರೀಧರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಕ್ಷಣ ಆರ್.ಎಸ್.ಎಸ್ ಮುಖಂಡನಿಗೆ ನಿಡಿರುವ ಟ್ರಸ್ಟ್ ಸದಸ್ಯತ್ವ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
