ಶಿವಮೊಗ್ಗ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಒಂದು ಕೂಡ ರದ್ದಾಗುವುದಿಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಅನರ್ಹರ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಗೆ ಬದಲಾಯಿಸುತ್ತೇವೆ. ಶೇಕಡ 15ರಷ್ಟು ಬಿಪಿಎಲ್ ಕಾರ್ಡ್ ದಾರರಷ್ಟೇ ರದ್ದಾಗಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಬಿಪಿಎಲ್ ಕಾರ್ಡ್ ಗಳನ್ನು ಕ್ಯಾನ್ಸಲ್ ಮಾಡಲಾಗುವುದು. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಿಸಲಾಗುವುದು ಎಂದು ಹೇಳಿದ್ದಾರೆ.
