ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಅವರ ಮೇಲೆ ಅಪರಿಚಿತರು ಫೈರಿಂಗ್ ಮಾಡಿದ್ದಾರೆ. ಮನೆಯ ಬಳಿ ಮಾತನಾಡುತ್ತ ನಿಂತಿದ್ದ ವೇಳೆಯಲ್ಲಿ ಫೈರಿಂಗ್ ಮಾಡಲಾಗಿದೆ. ಗುಂಡಿನ ದಾಳಿ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ.
ಗುಂಡು ತಗುಲಿ ಸಲೀಂ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
