ನವದೆಹಲಿ: ದೇಶಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಜಾಗಿದ್ದು, ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೂ ನೋಟಿಸ್ ಜಾರಿ ಮಾಡಿದೆ.
ಎಲ್ಲಾ ರಾಜ್ಯಗಳಿಂದಲೂ ಬೀದಿ ನಾಯಿಗಳ ದಾಳಿ ಬಗ್ಗೆ ವರದಿಗಳು, ದೂರುಗಳು ಬರುತ್ತಿವೆ. ಬೀದಿನಾಯಿಗಳ ಕಡಿವಾಣಕ್ಕೆ ಈವರೆಗೆ ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳೇನು? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಬೀದಿನಾಯಿಗಳ ಹಾವಳಿ ತಡೆಗಟ್ಟಲು ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಏನೆಲ್ಲಾ ವರದಿಗಳನ್ನು ಪಡೆದಿದ್ದೀರಿ? ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಅಲ್ಲದೇ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
