ಮೈಸೂರು: ಹುಲಿದಾಳಿಗೆ ರೈತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ತೆರಳಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆಗೆ ರೈತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ರೈತ ರಾಜಶೇಖರ (58) ಮೈಸೂರಿನ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿದಾಳಿಗೆ ಸಾವನ್ನಪ್ಪಿದ್ದರು. ರಾಜಶೇಖರ ಅವರ ಮೃತದೇಹ ಇರಿಸಲಾಗಿದ್ದ ಮೈಸೂರಿನ ಕೆ.ಆರ್. ಆಸ್ಪತ್ರೆ ಶವಾಗಾರಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದ್ದರು. ಈ ವೇಳೆ ಸಚಿವರಿಗೆ ಘೇರಾವ್ ಹಾಕಿದ ರೈತರು, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.
ಹುಲಿದಾಳಿಗೆ ರೈತ ಬಲಿಯಾಗಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಸಚಿವರು ರೈತರ ಅಳಲು ಆಲಿಸಿ ಸಮಾಧಾನಪಡಿಸಿದರು.
