ಶಿವಮೊಗ್ಗ: ಕಾರ್ಮಿಕ ಇಲಾಖೆ ಸಮುಚ್ಚಯದ ಕಟ್ಟಡದ ಗೋಡೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಕೋಟೆಗಂಗೂರಿನ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ.
ಮಂಜು (35) ಮೃತ ಕಾರ್ಮಿಕ. ಆತನ ಸಹೋದರ ಮುತ್ತು ಅವರಿಗೆ ಕೈ-ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಮಿಕ ಇಲಾಖೆ ಸಮುಚ್ಚಯದ ಒಂದು ಭಾಗದ ಗೋಡೆ ಕುಸಿದು ಈ ದುರಂತ ಸಂಭವಿಸಿದೆ.
ಗೋಡೆ ಅವಶೇಷಗಳಡಿ ಸಿಲುಕಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
