ಶಿವಮೊಗ್ಗ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಹೊರವಲಯದ ವಿರುಪಿನಕೊಪ್ಪದಲ್ಲಿ ಕಾರಿ ಡಿಕ್ಕಿಯಾಗಿ ಎರಡು ವರ್ಷದ ಬಾಲಕ ವಿನಯ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕ ಕೊನೆಯುಸಿರೆಳೆದಿದ್ದಾನೆ.
