ಹಾಸನ: ಯುವಕನೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.
ಪಟ್ಟಣದ ಹಳೆಬೀದಿಯ ಗಿರೀಶ್ (22) ಕೊಲೆಯಾದ ಯುವಕ. ಬಸ್ ನಿಲ್ದಾಣದ ಬಳಿ ನಿಂತಿದ್ದ ಗಿರೀಶ್ ನನ್ನು ಅಜ್ಜೇನಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬಾತ ಏಕಾಏಕಿ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಯಾವ ಕಾರಣಕ್ಕಾಗಿ ಯುವಕನ ಹತ್ಯೆಯಾಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
