HomeLatest NewsBREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಮೀನುಗಾರಿಕೆ ಕೋರ್ಸ್ ಗೆ ಮತ್ತೊಂದು...

BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಮೀನುಗಾರಿಕೆ ಕೋರ್ಸ್ ಗೆ ಮತ್ತೊಂದು ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: UGCET-25ರ ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನ ಕೋರ್ಸ್ ಗಳಲ್ಲಿ ಉಳಿದಿರುವ ಕೆಲವು ಸೀಟುಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಸೀಟು ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ.

ಹೀಗಾಗಿ ಆಪ್ಷನ್ಸ್ ದಾಖಲಿಸಲು ಅ.27ರಿಂದ ಅ.29ರವರೆಗೆ ಅವಕಾಶ ನೀಡಲಾಗಿದೆ.

ಯಾರೆಲ್ಲ ಅರ್ಹರು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ವಿಜ್ಞಾನ ಹಾಗೂ ಪಶು ವೈದ್ಯಕೀಯ ಕೋರ್ಸ್ ಗೆ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು ಮಾತ್ರ ಈ ಸುತ್ತಿನಲ್ಲಿ ಭಾಗವಹಿಸಬಹುದು. ಈ ಕೋರ್ಸ್ ಗಳಿಗೆ  ಸೀಟು ಹಂಚಿಕೆ ನಂತರ ರದ್ದುಪಡಿಸಿಕೊಂಡವರು ಈ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವುದಿಲ್ಲ.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳಿಗೆ ಸೇರಿರುವವರು ಕೂಡ ಅರ್ಹರಲ್ಲ.

ಈ ಕೋರ್ಸ್ ಗಳ ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಇಚ್ಛಿಸುವವರು ₹35 ಸಾವಿರ ಮುಂಗಡ ಪಾವತಿ ಮಾಡಬೇಕು.

ಸೀಟು ಹಂಚಿಕೆ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular