HomeLatest Newsಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ...

ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ಮಂಗಳೂರಿನ ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ. ಡಿವೈಎಸ್‌ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ. 2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ. 3ಕ್ಕೆ ಹೆಚ್ವಿಸಿದ್ದೇನೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಒಲಿಂಪಿಕ್‌ನಲ್ಲಿ ದೇಶಕ್ಕಾಗಿ ಪದಕ ತರಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ. ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular