BIG NEWS: ಶಿಕ್ಷಕರ ವರ್ಗಾವಣೆ ಮತ್ತೆ ಶುರು: 5ನೇ ಬಾರಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕಾರಣಾಂತರದಿಂದಾಗಿ ಸ್ಥಗಿತಗೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ಮತ್ತೆ ಚಾಲನೆ ನೀಡಲಾಗಿದೆ. ಸತತ ಐದನೇ ಬಾರಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ತತ್ಸಮಾನ ವೃಂದದ ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯಂತೆ ಹೊರಡಿಸಲಾಗಿತ್ತು.

ದಿನಾಂಕ: 24/09/2025ರಲ್ಲಿನ ಪ್ರಕಟಣೆಯಲ್ಲಿ ತಿಳಿಸಿರುವಂತೆ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಮುಂದುವರಿದು ಈ ಕೆಳಕಂಡ ಅನುಬಂಧ-2ರಲ್ಲಿರುವಂತೆ ಸಂತೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read