HomeLatest NewsBIG NEWS: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳಿಗೆ ಚುನಾವಣೆ ಪ್ರಕ್ರಿಯೆಗೆ ಚಾಲನೆ, ಚುನಾವಣಾಧಿಕಾರಿಗಳ ನೇಮಕ...

BIG NEWS: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳಿಗೆ ಚುನಾವಣೆ ಪ್ರಕ್ರಿಯೆಗೆ ಚಾಲನೆ, ಚುನಾವಣಾಧಿಕಾರಿಗಳ ನೇಮಕ ಮಾಡಿ ಆದೇಶ

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸಿದ್ದು, ಮತದಾರರ ಪಟ್ಟಿ ಪರಿಷ್ಕರಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗೆ ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಐದು ಪಾಲಿಕೆ ಆಯುಕ್ತರಿಗೆ ಈ ಜವಾಬ್ದಾರಿ ನೀಡಲಾಗಿದೆ. ಚುನಾವಣಾ ಆಯೋಗದ ಆದೇಶದ ಪ್ರಕಾರ ಒಟ್ಟು 368 ವಾರ್ಡ್ ಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ಧಪಡಿಸಲಾಗುವುದು.

ಪಟ್ಟಿ ಸಿದ್ದಪಡಿಸಲು ಜನವರಿ 19ರ ಅಂತಿಮ ಗಡುವು ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿಯನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಚುನಾವಣಾ ಆಯೋಗ ತನ್ನದೇ ಮತದಾರರ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆ. 2025 ರ ಜನವರಿಯಲ್ಲಿನ ಮತದಾರರ ಪಟ್ಟಿ ಪರಿಷ್ಕರಿಸಿ ಅದನ್ನು ಆಧಾರವಾಗಿಟ್ಟುಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular