ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎ- 1 ಆರೋಪಿ ಮಿಥುನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನವೀನ್, ಕಾರ್ತಿಕ್, ಶುಯೋಗ, ಸೀನ, ಜಂಗ್ಲಿ, ಪೃಥ್ವಿ ಹಾಗೂ ಮಿಥುನ್ ಎಂದು ಗುರುತಿಸಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ರಾತ್ರಿ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಏಕಾಏಕಿ ಮನೆಗೆ ನುಗ್ಗಿದ್ದ ಮೂವರು ಕುಡಿದ ಮತ್ತಿನಲ್ಲಿ ಹೇಯ ಕೃತ್ಯವೆಸಗಿ ಪರಾರಿಯಾಗಿದ್ದರು.ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ .
